ಶಿವಮೊಗ್ಗ : ಹೊಸ ಪಿಂಚಣಿ ವ್ಯವಸ್ಥೆಯನ್ನು ರದ್ದುಗೊಳಿಸಿ, ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸಲು ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ರಾಜ್ಯ ಸರ್ಕಾರ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದ್ದಾರೆ.
ನಗರದ ನೆಹರೂ ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರಿ ನೌಕರರು ವೇತನಾಧಾರಿತ ಬ್ಯಾಂಕ್ಖಾತೆ ತೆರೆದು, 1.20ಕೋಟಿ ಮೊತ್ತದ ವಿಮಾ ಸೌಲಭ್ಯ ಮತ್ತು ಮಕ್ಕಳ ಶೈಕ್ಷಣಿಕ ಸೌಲಭ್ಯ, ಆಕಸ್ಮಿಕ ಅಪಘಾತ ಮುಂತಾದ ಸೌಲಭ್ಯಗಳ ಲಾಭ ಪಡೆದುಕೊಳ್ಳಬೇಕು.
